ಸೆ.10: ದುಗ್ಗಲಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

0


ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಸೆ.10ರಂದು ದುಗ್ಗಲಡ್ಕ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪುಟಾಣಿಗಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ, ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಜಯರಾಮ ಗೌಡ ಪಾನತ್ತಿಲ ನೆರವೇರಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪದಲ್ಲಿ ಮಡಪ್ಪಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಬಹುಮಾನ ವಿತರಣೆ ಮಾಡಲಿದ್ದು, ಲಕ್ಷ್ಮೀಶ್ ಗಬ್ಬಲಡ್ಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.