ದೊಡ್ಡತೋಟ : ಶ್ರೀ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

0

ದೊಡ್ಡತೋಟ ಶ್ರೀರಾಮ ಭಜನಾ ಮಂದಿರದಲ್ಲಿ 16 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಇಂದು ಬೆಳಿಗ್ಗೆ ಶ್ರೀ ಗಣಪತಿ ಹವನ ದೊಂದಿಗೆ ಉದ್ಘಾಟನೆಗೊಂಡಿತು.

ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಗೆ ಮುದ್ದುಕೃಷ್ಣವೇಷ ಸ್ಪರ್ಧೆ ಹಾಗೂ ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಆರಂಭಗೊಂಡಿತು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ.