ಸೆ.19: ಜಾಲ್ಸೂರಿನಲ್ಲಿ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0


ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ವೇ. ಮೂ. ಪುರೋಹಿತ ನಯನಕೃಷ್ಣ ಭಟ್ ಅವರ ನೇತೃತ್ವದಲ್ಲಿ ಶ್ರೀ ಗುರುರಾಘವೇಂದ್ರ ಸಭಾಭವನದಲ್ಲಿ ಸೆ.19ರಂದು ಜರುಗಲಿದೆ.

ಪ್ರಾತ:ಕಾಲ ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಗಣಪತಿ ಹವನ, ಗಣೇಶ ಮೂರ್ತಿ ಪ್ರತಿಷ್ಠೆ, ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ.
ಬಳಿಕ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ನಾಗಸಾನಿಧ್ಯದಲ್ಲಿ ನಾಗತಂಬಿಲ, ಭಜನಾ ಸಂಕೀರ್ತನೆ ನಡೆಯಲಿದ್ದು, ಮಹಿಳೆಯರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ‌ಬಳಿಕ ಶ್ರೀ ವಿಘ್ನನಿವಾರಕನ ಶೋಭಾಯಾತ್ರೆಯು ಜಾಲ್ಸೂರಿನಿಂದ ಹೊರಟು ಅಡ್ಕಾರು, ವಿನೋಬನಗರ, ಕೋನಡ್ಕಪದವು, ಅಡ್ಕಾರು ಶ್ರೀ ಸುಬ್ರಹ್ಮಣ್ಯನ ಸನ್ನಿಗೆ ಸಾಗಿ, ಪಯಸ್ವಿನಿ ನದಿ ಕಿನಾರೆಯಲ್ಲಿ ಜಲಸ್ಥಂಭನ ನಡೆಯಲಿದೆ