ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಶ್ರಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೈಸೂರು ವಿಭಾಗೀಯ ವಾಲಿಬಾಲ್ ಪಂದ್ಯಾಟ

0

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಶ್ರಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೈಸೂರು ವಿಭಾಗೀಯ ಮಟ್ಟದ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಪಂದ್ಯಾಟ ಸೆ. 15 ರಂದು ಕೆ.ವಿ.ಜಿ. ಕ್ಯಾಂಪಸ್ ಕ್ರೀಡಾಂಗಣದಲ್ಲಿ ನಡೆಯಿತು.


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತರಾಷ್ಟ್ರೀಯ ಕಬಡ್ಡಿ ಆಟಗಾರ, ತೆಲುಗು ಟೈಟಾನಿಕ್ ಕಬಡ್ಡಿ ತಂಡದ ಕೋಚ್ ಜಗದೀಶ್ ಕುಂಬ್ಳೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎ.ಒ.ಎಲ್.ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಕೆ.ವಿ. ಹೇಮನಾಥ ಕುರುಂಜಿ ಅತಿಥಿಗಳಾಗಿ ಭಾಗವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕಿ ಶ್ರೀಮತಿ ಮೀನಾಕ್ಷಿ ಹೇಮನಾಥ್, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಕ್ರೀಡಾ ಸಂಯೋಜಕರಾದ ಡಾ. ರವಿಕಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೈದ್ಯಕೀಯ ವಿದ್ಯಾರ್ಥಿಗಳಾದ ನಿಕ್ಷೇಪ್ ಮತ್ತು ನಿಜ್ವಾನ್ ಪ್ರಾರ್ಥಸಿದರು. ಚಿರಾಗ್ ಮತ್ತು ಸುಭಾಶ್ ಕಾರ್ಯಕ್ರಮ ನಿರೂಪಿಸಿದರು. ನಿಕ್ಷೇಪ್ ಮುಖ್ಯ ಅತಿಥಿ ಜಗದೀಶ್ ಕುಂಬ್ಳೆ ಯವರನ್ನು ಪರಿಚಯಿಸಿದರು. ಮೈಸೂರು ವಿಭಾಗದಿಂದ 49 ಪುರುಷರ ಮತ್ತು 25 ಮಹಿಳಾ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿದೆ.

ಕ್ರೀಡೆ ನಮ್ಮ ದೈನಂದಿನ ಆರೋಗ್ಯವನ್ನು ವೃದ್ಧಿಸುತ್ತದೆ. ಪ್ರತೀ ದಿನ ಆರೋಗ್ಯ ವೃದ್ಧಿಗಾಗಿ ವಾಕಿಂಗ್ ಮಾಡಿ. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ – ಜಗದೀಶ್ ಕುಂಬ್ಳೆ

ವಿವಿಧ ವಿದ್ಯಾಸಂಸ್ಥೆಗಳಿಂದ ಬಂದ ಕ್ರೀಡಾಪಟುಗಳು ಉತ್ತಮ ರೀತಿಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವಿನ ಜೊತೆ ಸ್ಪೂರ್ತಿಯನ್ನು ಬೆಳೆಸಿಕೊಳ್ಳಿ – ಡಾ. ಕೆ.ವಿ. ಚಿದಾನಂದ

ಕ್ರೀಡೆಯಲ್ಲಿ ಗೆಲುವೊಂದೇ ಮುಖ್ಯ ಅಲ್ಲ. ಭಾಗವಹಿಸುವಿಕೆ ಮುಖ್ಯ. ಎಲ್ಲರೂ ಆಸಕ್ತಿಯಿಂದ ಭಾಗವಹಿಸಿ – ನೀಲಾಂಬಿಕೈ ನಟರಾಜನ್