ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾರತದ ಸಂವಿಧಾನದ ಪ್ರತಿಜ್ಞೆಯನ್ನು ಕೈಗೊಳ್ಳುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ಎಲ್ಲಾ ವಿದ್ಯಾರ್ಥಿಗಳು ನಮ್ಮ ದೇಶದ ಸಂವಿಧಾನವನ್ನು ದೇಶದ ಒಳಿತಿಗಾಗಿ ಅನುಸರಿಸಬೇಕು ಮತ್ತು ಎಲ್ಲರೂ ನನ್ನ ದೇಶ ಮೊದಲು ಎಂಬುದನ್ನು ಸದಾ ನೆನಪಿನಲ್ಲಿಡಬೇಕು ಎಂದು ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.