ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಇಂಜಿನಿಯರ್ಸ್ ದಿನಾಚರಣೆ

0


ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಇಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು. ಮಹಾನ್ ಇಂಜಿನಿಯರ್ ಆಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಇಂಜಿನಿಯರ್ಸ್ ದಿನಾಚರಣೆಯಾಗಿ ಆಚರಿಸಲಾಗುತ್ತದೆ.


ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ರವರು ನಮ್ಮ ದೇಶದ ಮೊದಲ ಸಿವಿಲ್ ಇಂಜಿನಿಯರ್ ಸರ್. ಎಂ.ವಿಶ್ವೇಶ್ವರಯ್ಯನವರು ದೇಶ ವಿದೇಶಗಳಲ್ಲಿ ಮಾಡಿರುವ ಕಾಮಗಾರಿಗಳು ಮತ್ತು ಸಾಧನೆಗಳ ಬಗ್ಗೆ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲೆಯ ವಿವಿಧ ಉಪಘಟಕದ ವಿದ್ಯಾರ್ಥಿಗಳು ಪ್ರಾಯೋಗಿಕ ಮಾದರಿಗಳನ್ನು,ವಿಶ್ವೇಶ್ವರಯ್ಯನವರ ಕುರಿತಾದ ವಿವಿಧ ರೀತಿಯ ಚಿತ್ರಕಲೆಗಳನ್ನು ಪ್ರದರ್ಶಿಸಿದರು.


ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ವಿದ್ಯಾರ್ಥಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.