ನೆಹರು ಮೆಮೋರಿಯಲ್ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ

0

ನೆಹರು ಮೆಮೋರಿಯಲ್ ಕಾಲೇಜಿನ ದೃಶ್ಯ-ಶ್ರವಣ ಕೊಠಡಿಯಲ್ಲಿ ನಾಂದಿ ಫೌಂಡೇಶನ್ ಸಂಸ್ಥೆಯ ವತಿಯಿಂದ ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಮುಂದಾಳತ್ವದಲ್ಲಿ ೭ ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಉದ್ಘಾಟಿಸಿದರು. ನಾಂದಿ ಫೌಂಡೇಶನ್ ಸಂಸ್ಥೆಯ ಸುರೇಶ್ ಶಾಸ್ತ್ರೀಯವರು ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ ರತ್ನಾವತಿ ಡಿ. ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಅಧಿಕಾರಿ ಡಾ. ಮಮತಾ ಕೆ ಉಪಸ್ಥಿತರಿದ್ದರು. ತೃತೀಯ ಬಿ.ಎ ಪದವಿ ವಿದ್ಯಾರ್ಥಿನಿ ನಿರೀಕ್ಷಾ ಜೆ ಇವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಅಧಿಕಾರಿ ಡಾ. ವಿಜಯಲಕ್ಷ್ಮಿ ಎನ್.ಎಸ್ ವಂದಿಸಿದರು.