ನಾಳೆ (ಸೆ.16) ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಹನುಮಂತಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ

0

ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ ಅವರಿಗೆ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಭಿನಂದನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ಸೆ.16ರಂದು ಬೆಳಿಗ್ಗೆ ನಡೆಯಲಿದೆ.

ಗೂನಡ್ಕ ಶ್ರೀ ಶಾರದಾ ವಿದ್ಯಾಸಂಘದ ಅಧ್ಯಕ್ಷ ಜಿ. ರಾಮಚಂದ್ರ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಶಾರದಾ ವಿದ್ಯಾಸಂಘದ ಸಂಚಾಲಕ ಎಸ್.ಪಿ. ಲೋಕನಾಥ್ , ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. , ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಮ್ಮರ್ ಬೀಜದಕಟ್ಟೆ ಗೌರವ ಉಪಸ್ಥಿತರಿರಲಿದ್ದಾರೆ.

ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ಮಾಸ್ತರ್ ಕೆ. ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಚಿದಾನಂದ ಯು.ಎಸ್. ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.