ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

0

ಸುಳ್ಯದ ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯು ಸೆ.13ರಂದು ಜರುಗಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಡಿ.ಎಸ್. ಶೇಷಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಪೂರ್ವಭಾವಿ ಸಭೆಯಲ್ಲಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಚಂಡಿಕಾಯಾಗ, ವಿಜಯದಶಮಿ ಆಚರಣೆ ಮಾಡುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ಚಂಡಿಕಾಯಾಗದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.