ಯೇನೆಕಲ್ಲು ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕಿನ ಡಿ.ಜಿ.ಎಂ, ಎ.ಜಿ.ಎಂ. ಭೇಟಿ

0

ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕಿನ ಡಿ.ಜಿ.ಎಂ ಮಂಜುನಾಥ ಗೌಡ ವಿ. ಪಾಟೀಲ್ ಮತ್ತು ಎ.ಜಿ.ಎಂ. ನಾಗರಾಜ್ ಸೆ. 16ರಂದು ಭೇಟಿ ನೀಡಿದರು.
ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಉಪಾಧ್ಯಕ್ಷ ಭರತ್ ನೆಕ್ರಾಜೆ ಅತಿಥಿಗಳನ್ನು ಬರಮಾಡಿಕೊಂಡರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕಾರಿಗಳಾದ ನವೀನ್, ಸುಬ್ರಹ್ಮಣ್ಯ ಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕರಾದ ಚಂದ್ರಪ್ರಕಾಶ್ ಕಂಬಳ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ಮೇಲ್ವಿಚಾರಕರಾದ ಮನೋಜ್ ಮಾಣಿಬೈಲು ಹಾಗೂ ಪ್ರದೀಪ್ ಇವರ ಜೊತೆಗಿದ್ದರು. ಅತಿಥಿಗಳು ಸಂಘದ ಸೇವಾ ಮತ್ತು ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕೆ.ಆರ್, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ ಕೇದಿಗೆಬನ ಮತ್ತು ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.