ಸುಳ್ಯ ಶ್ರೀ ಶಾರದಾ ಮಹಿಳಾ ಪ.ಪೂ. ಕಾಲೇಜು ಉಪನ್ಯಾಸಕ ವೃಂದಕ್ಕೆ ಗೌರವ

0

2022.23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಕಲಾ,ವಿಜ್ಞಾನ,ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ಪಡೆದಿದ್ದು, ಸೆ.17 ರಂದು ಮಂಗಳೂರಿನ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜು ಗಳ ಪ್ರಾಂಶುಪಾಲರ ಸಂಘದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ., ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಪ್ರಶಸ್ತಿ ಪತ್ರ, ಫಲಕ, ಹಾರ, ಹೂವಿನೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.