ವಿನೋಬನಗರ: ವಿವೇಕಾನಂದ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

0

ಸೆ.24ರಂದು ಗೋಕಾಕ್ ನಲ್ಲಿ ಪ್ರಶಸ್ತಿ ಪ್ರಧಾನ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಡಿನ ಸಮಾಚಾರ ಕನ್ನಡ ದಿನಪತ್ರಿಕೆ, ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ್ ಇದರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಗುರುವಂದನಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಅವರು ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿಗೆ ಅಯ್ಕೆಯಾಗಿದ್ದಾರೆ. ಬೆಳಗಾವಿಯ ಕುಮಾರ ಗಂದರ್ವ ಕಲಾ ಮಂದಿರದಲ್ಲಿ ನಾಡಿನ ಸಮಾಚಾರ ಸೇವಾ ಸಂಘ, ನಾಡಿನ ಸಮಾಚಾರ ಕನ್ನಡ ದಿನಪತ್ರಿಕೆ ಆಶ್ರಯದಲ್ಲಿ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

ಜಯಪ್ರಸಾದ್ ಕಾರಿಂಜ ಅವರು ಕಳೆದ ಹನ್ನೆರಡು ವರ್ಷಗಳಿಂದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಶಿಕ್ಷಣದ ಜೊತೆಗೆ ಕನಕಮಜಲಿನ ಯುವಕ ಮಂಡಲದ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಧಾರ್ಮಿಕ ಹಾಗೂ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದು, ಇವೆಲ್ಲವನ್ನು ಪರಿಗಣಿಸಿ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.