ಬಂಟರಯಾನೆ ನಾಡವರ ಮಾತೃ ಸಂಘದ ವತಿಯಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರಿಗೆ ಸನ್ಮಾನ

0

ಬಂಟರ ಯಾನೆ ನಾಡವರ ಮಾತೃ ಸಂಘ ಉಡುಪಿ ಇದರ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘದ ವತಿಯಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸೆ.20ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಬಂಟರ ಯಾನೆ ನಾಡವರ ಸಂಘದ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹಿಂದೂ ದೇವಸ್ಥಾನಗಳಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಬಂಟರನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಗುರುತಿಸಿ, ಸನ್ಮಾನಿಸಿ, ಗೌರವಿಸಲಾಯಿತು.