ದೇವರಕೊಲ್ಲಿಯಲ್ಲಿ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಆಚರಣೆ

0

ದೇವರ ಕೊಳ್ಳಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಪ್ರಥಮ ವರ್ಷದ ಶ್ರೀ ಗೌರಿ ಗಣೇಶೋತ್ಸವ ಕಾರ್ಯಕ್ರಮವು ಸೆ.19ರಂದು ನಡೆಯಿತು.

ಬೆಳಿಗ್ಗೆ ಗೌರಿ ಪ್ರತಿಷ್ಠಾಪನೆ, ಗಣೇಶನ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ, ಸಂಜೆ ಶ್ರೀ ದೇವರ ಮೂರ್ತಿಯ ಶೋಭಾಯಾತ್ರೆ ಮತ್ತು ಜಲ ಸ್ತಂಭನ ನಡೆಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ದೇವರ ಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಸಮಿತಿ, ಊರವರು ಉಪಸ್ಥಿತರಿದ್ದರು.