ಪಂಜ: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

0


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ.20 ರಂದು ನಡೆಯಿತು.


ಸಭಾಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಟೈಟಸ್ ವರ್ಗಿಸ್ ವಹಿಸಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಯನ್ನು ಬೋಧಿಸಿದರು.


ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ಕುಶಾಲಪ್ಪ ಗೌಡ ದೊಡ್ದಮನೆ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸೋಮಶೇಖರ ನೇರಳ ರವರು ಮಾತನಾಡಿ “ಹದಿಹರೆಯದ ಮಕ್ಕಳು ದುಶ್ಚಟಗಳಿಗೆ ಬಲಿಯಾಗ ಬಾರದು ಎನ್ನುವುದೇ ಈ ಕಾರ್ಯಕ್ರಮದ ಧ್ಯೇಯೋದ್ದೇಶ. ಅತೀ ಆದ್ರೆ ಅಮೃತವೂ ವಿಷ ಆಗುವುದು. ನಿಮ್ಮ ಗುರಿ ಒಂದೇ ಓದು ಮತ್ತು ಕ್ರೀಡೆ.ಜೀವನ ದಲ್ಲಿ ಒಳ್ಳೆಯ ಆದರ್ಶಗಳನ್ನು ಇಟ್ಟುಕೊಳ್ಳಿ. ತಂದೆ ತಾಯಿಗಳಿಗೆ ಒಳಿತು ಆಗುವಂತೆ ನಡೆದುಕೊಳ್ಳಿ”ಎಂದರು.

ಮುಖ್ಯ ಅತಿಥಿ ಪಂಜ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಹಿನ್ನೆಲೆ ಬಗ್ಗೆ ಪ್ರಾಸ್ತವಿಕ ಮಾತನಾಡಿದರು. ಪಂಜ ಕಾಲೇಜಿನ ಉಪನ್ಯಾಸಕ ಚಿದಾನಂದ ಸಭೆಯಲ್ಲಿ ಉಪಸ್ಥಿತರಿದ್ದರು. ಪಂಜ ವಲಯದ ಮೇಲ್ವಿಚಾರಕಿ ಶ್ರೀಮತಿ ಕಲಾವತಿ ‌ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ ವಂದಿಸಿದರು. ಐವತ್ತೊಕ್ಲು ಒಕ್ಕೂಟದ ಸೇವಾಪ್ರತಿನಿಧಿ ಶ್ರೀಮತಿ ರೋಹಿಣಿ ಅರ್ನೋಜಿ ನಿರೂಪಿಸಿದರು. ಯೋಜನೆ ವತಿಯಿಂದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.