ಸೈಂಟ್ ಜೋಸೆಫ್ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರಿಗೆ ರನ್ನರ್ ಪ್ರಶಸ್ತಿ

0


ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಭಗವಾನ್ ಸತ್ಯಸಾಯಿ ವಿದ್ಯಾ ಕೇಂದ್ರ ಚೊಕ್ಕಾಡಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಬಾಲಕರ ತಂಡ ರನ್ನರ್ ಪ್ರಶಸ್ತಿ ಗಳಿಸಿದೆ.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದರು.