ದ.ಕ.ಜಿ.ಪಂ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಾಲ್ಸೂರು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಡಿಯಲ್ಲಿ ಸೋಣಂಗೇರಿ ಶಾಲಾ ವಠಾರ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯವು ಸೆ.22ರಂದು ನಡೆಯಿತು.
ಸೋಣಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕುಸುಮಾವತಿ ಅವರು ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಡಿ., ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎ.ಎಲ್., ಸದಸ್ಯರುಗಳಾದ ಈಶ್ವರ ನಾಯ್ಕ ಕುಕ್ಕಂದೂರು, ಶಿವಪ್ರಸಾದ್ ನೀರಬಸಿರು, ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಕೆ.ಪಿ.ಸುಬ್ಬಯ್ಯ ಸೇರಿದಂತೆ ಸ್ಥಳೀಯ ನಾಗರಿಕರು, ಶಾಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು.