ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ದೀಕ್ಷಾ ಭೂಮಿಗೆ ಭೇಟಿ : ಅರ್ಜಿ ಆಹ್ವಾನ

0

ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಜನರು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿಗೆ ಭೇಟಿ ಮಾಡಲು ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.
2023- 24ನೇ ಸಾಲಿನಲ್ಲಿ ದೀಕ್ಷಾಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳು ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ರಲ್ಲಿ ದಿನಾಂಕ 20.09.2023 ರಿಂದ 10 .10.23ರ ವರೆಗೆ ಆಹ್ವಾನಿಸಲಾಗಿದೆ.