ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

0

ವಾರ್ಷಿಕ ವ್ಯವಹಾರ ರೂ. 86,88,771.42 ಲಾಭ 83,620.38 ರೂ

ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಎನ್.ವಸಂತಕುಮಾರ್ ರವರ ಅಧ್ಯಕ್ಷತೆಯಲ್ಲಿ ಸೆ.20 ರಂದು ಸಂಘದ ಸಭಾಭವನದಲ್ಲಿ ನಡೆಯಿತು.
ಸಂಘದ ಕಾರ್ಯದರ್ಶಿ ಹಿರಿಯಣ್ಣರವರು ವಾರ್ಷಿಕ ವರದಿ ಮಂಡಿಸಿದರು.


ಸಂಘವು 2022 – 23 ರಲ್ಲಿ 86,88,771 .42 ರೂ ವ್ಯವಹಾರ ನಡೆಸಿದ್ದು 83,620 .38 ರೂ ಲಾಭ ಗಳಿಸಿರುತ್ತದೆ.
ಆರ್ಥಿಕ ವರ್ಷದಲ್ಲಿ ಅತೀ ಹೆಚ್ಚು ಹಾಲು ಹಾಕಿದ ಇಬ್ಬರು ಸದಸ್ಯರಿಗೆ ಬಹುಮಾನ ನೀಡಲಾಯಿತು.
2022-23 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಾಲು ಉತ್ಪಾದಕ ಸದಸ್ಯರ 3 ಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಅತಿಥಿಗಳಾಗಿ ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಡಾ.ಚರಣ್ ಹಾಗೂ ವಿಸ್ತರಣಾಧಿಕಾರಿ ಎಂ.ಎಸ್.ಹರೀಶ್ ಕುಮಾರ್ ಭಾಗವಹಿಸಿದ್ದರು.ಕಾರ್ಯದರ್ಶಿ ಹಿರಿಯಣ್ಣ ಕಾರ್ಯಕ್ರಮ ನಿರೂಪಿಸಿದರು.