ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಶ್ರೀ ಕ್ಷೇ .ಧ .ಗ್ರಾ ಯೋಜನೆ ಬಿ ಸಿ ಟ್ರಸ್ಟ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸೆ.22 ರಂದು ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜ್ಯೋತಿಲಕ್ಷ್ಮಿ ದೀಪ ಬೆಳಗಿಸಿದರು. ಸಂಪನ್ಮೂಲ ವ್ಯಕ್ತಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ ಅಮೆಚೂರ್ ಸ್ವಸ್ಥ ಸಮಾಜವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು.
ಮನೋಹರ್ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕ ಇಬ್ರಾಹಿಮ್ ವೇದಿಕೆಯಲ್ಲಿದ್ದರು.
ಸೇವಾ ಪ್ರತಿನಿಧಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.
ಮೇಲ್ವಿಚಾರಕಿ ಶ್ರೀಮತಿ ಪ್ರಿಯಾ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಅಶ್ವಿನಿ ವಂದಿಸಿದರು.