ಸುಬ್ರಹ್ಮಣ್ಯ ಪೊಲೀಸ್ ಠಾಣಾ ಪ್ರಕಟಣೆ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ವತಿಯಿಂದ ನಡೆಯುವ ಗಣಪತಿ ಶೋಭಯಾತ್ರೆಯು ಸೆ.೨೩ (ಇಂದು) ನಡೆಯಲಿದ್ದು ಕುಮಾರದಾರದಿಂದ ಕಾಶಿಕಟ್ಟೆಯವರೆಗೆ ರಸ್ತೆ ಬದಿ ವಾಹನ ಪಾರ್ಕಿಂಗ್ ನಿಷೇಧಿಸಲಾಗಿದೆ ಎಂದು ಸುಬ್ರಹ್ಮಣ್ಯ ಠಾಣೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕುಮಾರದಾರದಿಂದ ಕಾಶಿಕಟ್ಟೆಯವರೆಗೆ ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಮಧ್ಯಾಹ್ನ ಗಂಟೆ ೦೨:೦೦ ರಿಂದ ರಾತ್ರಿ ೧೦:೦೦ ಗ೦ಟೆಯ ವರೆಗೆ ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ನಿಷೇದಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ , ಕಾರ್ತಿಕ್, ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.