458 ಕೋಟಿ ವ್ಯವಹಾರ, 1 ಕೋಟಿ 52 ಲಕ್ಷ ಲಾಭಂಶ : ಶೇ.7.5 ಡಿವಿಡೆಂಟ್ ಘೋಷಣೆ
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ವಾರ್ಷಿಕ ಮಹಾಸಭೆ ಸೆ.23 ರಂದು ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ಸಂಘವು ₹ 1,52,08,158.63 ಲಾಭಂಶ ಗಳಿಸಿದ್ದು ಶೇ.7.5 ಡಿವಿಡೆಂಟ್ ಘೋಷಿಸಿದರು. 2022 – 23 ಸಾಲಿನಲ್ಲಿ ಸಂಘವು ₹4,58, 52,35,827.55 ಕೋಟಿ ವ್ಯವಹಾರ ಮಾಡಿರುವುದಾಗಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಸಭೆಗೆ ತಿಳಿಸಿದರು.
ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಎ.ಕೆ ಸಂಘದ 2022 – 2023 ಸಾಲಿನ ವರದಿ ವಾಚಿಸಿದರು.
ವೇದಿಕೆಯಲ್ಲಿ ಸಂಘದ
ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ ಗೌಡ, ಎ.ವಿ ತೀರ್ಥರಾಮ, ಕೇಶವ ಭಟ್ ಮುಳಿಯ, ಶ್ರೀಮತಿ ಮಂಜುಳಾ ಮುತ್ಲಾಜೆ, ರವಿಪ್ರಕಾಶ್ ಬಳ್ಳಡ್ಕ, ಕೃಷ್ಣಯ್ಯ ಮೂಲೆತೋಟ, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು, ಚಂದ್ರಾವತಿ ಮುಂಡೋಡಿ, ಕುಂಞ ಬಳ್ಳಕ್ಕ, ಆನಂದ ಹಲಸಿನಡ್ಕ ಉಪಸ್ಥಿತರಿದ್ದರು. ಆರಂಭದಲ್ಲಿ ಬಳ್ಳಕ್ಕ ಶಾಖೆಯನ್ನು ಈಶ್ವರ ಮಾಸ್ತರ್ ಮಂಜೋಳ್ ಗಿರಿ ಲೋಕಾರ್ಪಣೆ ಮಾಡಿದರು. ಬಳಿಕ ಪ್ರಸಕ್ತ ಸಾಲಿನಲ್ಲಿ ನಿಧನ ಹೊಂದಿದ ಸಂಘದ ಸದಸ್ಯರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯ ನಿರ್ವಹಣಾಧಿಕಾರಿ ಶರತ್ ವಂದಿಸಿದರು. ಕಿಶೋರ್ ಕುಮಾರ್ ಪೈಕ ಬೊಮ್ಮದೇರೆ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಸಂಸ್ಥೆಯ ವಿವಿಧ ವಿಭಾಗಳಲ್ಲಿ ಹೆಚ್ಚಿನ ವ್ಯವಹಾರ ನೀಡಿದವರನ್ನು ಗೌರವಿಸಲಾಯಿತು.
ಸಭೆಯಲ್ಲಿ ದೇವಚಳ್ಳ ಗ್ರಾಮಕ್ಕೆ ಪತ್ಯೇಕ ಸಂಘದ ಬೇಡಿಕೆ ಬಗ್ಗೆ, ರೇಷನ್ ಹಂಚಿಕೆ ಬಗ್ಗೆ, ಕಳೆದ ಸಾಲಿನ ಮಹಾಸಭೆಯ ನಿರ್ಣಯ ಬಗ್ಗೆ, ಅಡಿಟ್ ವರದಿ ಯ ಬಗ್ಗೆ ಚರ್ಚೆಗಳು ನಡೆದವು.