ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಗಾಣಿಗ ಸಮ್ಮಿಲನ -2023 ರ ಕಾರ್ಯಕ್ರಮದ ಪೂರ್ವ ಭಾವಿಯಾಗಿ ಗಾಣಿಗ ಸಮಾಜ ಬಾಂಧವರಿಗೆ ಕ್ರೀಡೋತ್ಸವ ಮತ್ತು ಭಕ್ತಿ ಗೀತೆ ಸ್ಪರ್ಧೆಯು ಸೆ.24 ರಂದು ಸುಳ್ಯ ಜೂನಿಯರ್ ಕಾಲೇಜ್ ಮೈದಾನದಲ್ಲಿ ಜರುಗಿತು.
ಕ್ರೀಡೋತ್ಸವದ ಉದ್ಘಾಟನಾ ಸಮಾರಂಭ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ನ್ಯಾಯವಾದಿ ಚಂದ್ರಶೇಖರ ಉದ್ದಂತಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಿವೃತ್ತ ಯೋಧ ಲೋಕೇಶ್ಇರಂತಮಜಲು ದೀಪ ಪ್ರಜ್ವಲಿಸಿ ಕ್ರೀಡೋತ್ಸವಕ್ಕೆ ಶುಭ ಹಾರೈಸಿದರು.
ಅತಿಥಿಗಳಾಗಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರ ಪಾಟಾಳಿ ಪರಿವಾರಕಾನ, ಸಂಘದ ಆಂತರಿಕ ಲೆಕ್ಕ ಪರಿಶೋಧಕ ಮಹಾಲಿಂಗನ್ ಬಾಜರ್ತೊಟ್ಟಿ, ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದ ಕರಣಿಕ ಚಂದ ಕುಡೆಕಲ್ಲು ಉಪಸ್ಥಿತರಿದ್ದರು. ಉದಯರವಿ ಕಲ್ಚಾರು ಸ್ವಾಗತಿಸಿ, ಸಂಚಾಲಕ ಪ್ರವೀಣ್ ಜಯನಗರ ಕಾರ್ಯಕ್ರಮ ನಿರೂಪಿಸಿದರು.
ಸಮಾಜ ಬಾಂಧವರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳಿಗೆ ಕಾಳು ಹೆಕ್ಕುವುದು, ಕಪ್ಪೆ ಜಿಗಿತ, ಬಕೆಟಿಗೆ ಬಾಲ್ ಹಾಕುವುದು, ಓಟದ ಸ್ಪರ್ಧೆ, ಲಕ್ಕಿ ಗೇಮ್, ಗೋಣಿ ಚೀಲ ಓಟ, ಮಹಿಳೆಯರಿಗೆ ಮತ್ತು ಪುರುಷರಿಗೆ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ಗುಂಡೆಸೆತ, ಪುರುಷರಿಗೆ ಕಬಡ್ಡಿ ಪಂದ್ಯಾಟ, ಹಿರಿಯ ನಾಗರಿಕರಿಗೆ ಲಕ್ಕಿ ಗೇಮ್ ಮತ್ತು ಬಕೆಟಿಗೆ ಬಾಲ್ ಹಾಕುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳಿಗೆ ಭಕ್ತಿ ಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಂಘದಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಉಪ ಸಮಿತಿ ಸದಸ್ಯರು ಸ್ವಯಂ ಸೇವಕರಾಗಿ ಸಹಕರಿಸಿದರು.