ಬೆಳ್ಳಾರೆ: ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

0

ಕರ್ನಾಟಕ ಸರಕಾರ ಗ್ರಾಮ ಪಂಚಾಯತ್ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಮತ್ತು ಸ್ನೇಹಿತರ ಕಲಾ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಸಪ್ಟೆಂಬರ್ 22 ರಂದು ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರ ವಸಂತ ಉಲ್ಲಾಸ್ ರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ನಮಿತಾ ಪಿ.ಎಲ್ ರೈ ದ್ವಿಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಬೆಳ್ಳಾರೆ ಜೇಸಿ ಪೂರ್ವಾಧ್ಯಕ್ಷ ಮಹಮ್ಮದ್ ಆರಿಫ್ ಶುಭ ಹಾರೈಸಿದರು. ಬೆಳ್ಳಾರೆ ಪ್ರಶಾಂತಿ ಕ್ಲಿನಿಕ್ ವೈದ್ಯರಾದ ಡಾ. ಕಾರ್ತಿಕ್ ಎಸ್ ಸಂಪನ್ಮೂಲ ವ್ಯಕ್ತಿಯಾಗಿ ಮಧುಮೇಹ, ರಕ್ತದ ಒತ್ತಡ ಇನ್ನಿತರ ಆರೋಗ್ಯ ಸಮಸ್ಯೆಗಳ ಬಗ್ಗೆ ಆರೋಗ್ಯ ಮಾಹಿತಿ ನೀಡಿದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಧನಲಕ್ಷ್ಮೀ ಶ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಅಧ್ಯಕ್ಷರಾದ ಶ್ರೀಮತಿ ವೀಣಾ ಗಿರೀಶ್ ಕೊಲ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ಬೇಬಿ ವೇದಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ 5 ವಿಭಾಗದಲ್ಲಿ ಸುಮಾರು 50 ಬಗೆಯ ವಿವಿಧ ಪೌಷ್ಟಿಕ ಆಹಾರಗಳ ಪ್ರದರ್ಶನ ನಡೆಸಿ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹ ನೀಡಲಾಯಿತು. ಇದೆ ಸಂದರ್ಭದಲ್ಲಿ ಅಂಗನವಾಡಿ ಮತ್ತು ಶಿಶು ಮಂದಿರದ ಪುಟಾಣಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿ ಗಳಿಗೆ ಬಹುಮಾನ ನೀಡಲಾಯಿತು. ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರು ಸ್ವಾಗತಿಸಿ ಬೆಳ್ಳಾರೆ ಮಾಸ್ತಿಕಟ್ಟೆ ಅಂಗನವಾಡಿ ಶಿಕ್ಷಕಿ ಶ್ರೀಮತಿ ಇಂದಿರಾ ಅಜಪಿಲ ವಂದಿಸಿದರು. ಪೂರ್ಣಿಮಾ ನೆಟ್ಟಾರು ಪ್ರಾರ್ಥಿಸಿದರು. ಬೆಳ್ಳಾರೆ ಅಂಗನವಾಡಿ ಶಿಕ್ಷಕಿ ಶ್ರೀಮತಿ ಭಾರತಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಶಿಕ್ಷಕಿಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.