ವರ್ಗಾವಣೆಗೊಂಡಿರುವ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರಿಗೆ ಪ್ರೆಸ್ ಕ್ಲಬ್ ವತಿಯಿಂದ ಬೀಳ್ಕೊಡುಗೆ

0

ಮೂರುವರೆ ವರ್ಷಗಳ ಕಾಲ ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ನವೀನ್ ಚಂದ್ರ ಜೋಗಿಯವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಸೆ.25 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.

ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರು ನವೀನ್ ಚಂದ್ರ ಜೋಗಿಯವರನ್ನು ಗೌರವಿಸಿದರು.

ವಿದೇಶ ಪ್ರಯಾಣ ತೆರಳಲಿರುವ ಪ್ರೆಸ್ ಕ್ಲಬ್ ನಿರ್ದೇಶಕ ಶರೀಫ್ ಜಟ್ಟಿಪಳ್ಳರನ್ನು ಗೌರವಿಸಲಾಯಿತು.

ಸುಳ್ಯ ಪ್ರೆಸ್ ಕ್ಲಬ್ ಉಪಾಧ್ಯಕ್ಷ ಜೆ.ಕೆ.ರೈ ವೇದಿಕೆಯಲ್ಲಿದ್ದರು. ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ರಮೇಶ್ ನೀರಬಿದಿರೆ ವಂದಿಸಿದರು.