ಅ.2ರಂದು ಅರಂತೋಡಿನಲ್ಲಿ ವಿಶೇಷ ಗ್ರಾಮಸಭೆ ಹಾಗೂ ಯೋಧ ನಮನ ಕಾರ್ಯಕ್ರಮ

0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸುಳ್ಯ ತಾಲೂಕು ಪಂಚಾಯತಿ, ಅರಂತೋಡು ಗ್ರಾಮ ಪಂಚಾಯತಿ, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಹೀ ಸೇವಾ ಅಂಗವಾಗಿ ವಿಶೇಷ ಗ್ರಾಮಸಭೆ ಮತ್ತು ಯೋಧ ನಮನ ಕಾರ್ಯಕ್ರಮವು ಅ.2ರಂದು ಅರಂತೋಡಿನ ಅಮೃತ ಸಭಾಂಗಣದಲ್ಲಿ ಜರುಗಲಿದೆ.

ಪೂರ್ವಾಹ್ನ ಯೋಧರಿಗೆ ಗೌರವ ಮೆರವಣಿಗೆ ನಡೆಯಲಿದ್ದು , ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಲಿದ್ದು, ಅರಂತೋಡು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ಆರ್. ಗಂಗಾಧರ ಅವರು ಅಭಿನಂದನಾ ಭಾಷಣ ಮಾಡಲಿದ್ದು, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.