ಬಳ್ಪ ಗ್ರಾಪಂ. ನಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅ. 1ರಂದು ಸ್ವಚ್ಚತಾ ಕಾರ್ಯ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ, ಉಪಾಧ್ಯಕ್ಷೆ ಶ್ರೀಮತಿ ಪಾರ್ವತಿ ಪಿ.ಡಿ, ಹಾಗೂ ಸದಸ್ಯರು, ಸಂಜೀವಿನಿ ಸಂಘದ ಸದಸ್ಯರು, ಎಂಬಿಕೆಯವರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ ಮತ್ತು ಸಿಬ್ಬಂದಿ ವರ್ಗ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.