ಪಂಜದಲ್ಲಿ ಬೃಹತ್ ರಕ್ತದಾನ ಶಿಬಿರ – 111ಯೂನಿಟ್ ರಕ್ತದಾನ

0

ರಾಜ್ಯ ಪ್ರಶಸ್ತಿ ಪುರಸ್ಕೃತ
ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್,ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಪ್ರಾಥಮಿಕ ಅರೋಗ್ಯ ಕೇಂದ್ರ ಪಂಜ, ಗ್ರಾಮ ಪಂಚಾಯತ್ ಪಂಜ ಇದರ ಸಹಯೋಗದೊಂದಿಗೆ, ವಿವಿಧ ಸಂಘ ಸಂಸ್ಥೆಗಳ ಸಹಕರದೊಂದಿಗೆ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಅ.1ರಂದು ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. 111 ಯೂನಿಟ್ ರಕ್ತ ದಾನವಾಗಿದ್ದು ದಾಖಲೆಯಾಗಿದೆ.ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.