“ಧೀಮಂತ ನಾಯಕರಾದ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಸರಳ ಜೀವನ ಸತ್ಯನಿಷ್ಠೆ ಪ್ರಾಮಾಣಿಕತೆ ಇವುಗಳನ್ನು ನಾವು ಮೈಗೂಡಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಬೇಕು. ಕೊಳ್ಳುಬಾಕತನ ಸಂಸ್ಕೃತಿಯು ನಮ್ಮ ವ್ಯಕ್ತಿತ್ವಕ್ಕೆ ಒಳ್ಳೆಯದಲ್ಲ” ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಹೇಳಿದರು .
ಅವರು ಅ.2ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಮ್ಮ ಶಾಲಾ ಶಿಕ್ಷಕಿ ಶ್ರೀಮತಿ ವನಿತಾ ಇವರು ಗಾಂಧೀಜಿಯವರ ಬಗ್ಗೆ ಮಾತನಾಡಿ “ಜಗತ್ತು ಬದಲಾಗಬೇಕಾದರೆ ಮೊದಲು ತನ್ನಿಂದಲೇ ಆರಂಭವಾಗಬೇಕು ಎಂಬ ಗಾಂಧೀಜಿಯವರ ನೀತಿಯನ್ನು ಪಾಲಿಸುವುದರ ಮೂಲಕ ಉತ್ತಮ ವ್ಯಕ್ತಿತ್ವ ವನ್ನು ರೂಪಿಸಿಕೊಳ್ಳೋಣ” ಎಂದು ಹೇಳಿದರು. ಇನ್ನೋರ್ವ ಶಿಕ್ಷಕಿ ಕುಮಾರಿ ಲಿಕ್ಷಿತ ಇವರು ಮಾತನಾಡಿ “ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬಂತೆ ದೇಶಕ್ಕೆ ಅದ್ಭುತ ಕೊಡುಗೆಯನ್ನು ನೀಡಿದವರು ಶಾಸ್ತ್ರೀಜಿ . ಅವರ ವ್ಯಕ್ತಿತ್ವ ನಮಗೆಲ್ಲರಿಗೂ ಆದರ್ಶವಾಗಲಿ” ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಚಂದ್ರಕಲಾ ಎ. ಬಿ ಇವರು ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಪವಿತ್ರ ಇವರು ವಂದಿಸಿದರು. ಶಿಕ್ಷಕಿ ಶ್ರೀಮತಿ ಜಯಂತಿ ಇವರು ಕಾರ್ಯಕ್ರಮ ನಿರೂಪಿಸಿದರು.