ಸುಳ್ಯದಲ್ಲಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ

0

ಸುಳ್ಯಕ್ಕೆ ಆಗಮಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಭವ್ಯ ಸ್ವಾಗತ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಅಖಿಲ‌ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಸುಳ್ಯದ ಅಮರಶ್ರೀಭಾಗ್ ನ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯುವ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾಚೇಶಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಗಮಿಸಿದ್ದು ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯವಾಗಿ ಡಾ.ಹೆಗ್ಗಡೆಯವರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು.

ಸುಳ್ಯಕ್ಕೆ ಬಂದ ಖಾವಂದರು ಸುಳ್ಯದ ಯೋಜನಾ ಕಚೇರಿಗೆ ಭೇಟಿ ನೀಡಿ ಬಳಿಕ ಸಮಾವೇಶ ಸ್ಥಳಕ್ಕೆ ಆಗಮಿಸಿದರು.