ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಂಘ ಇದರ 2023-24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ೦೩.೧೦.೨೦೨೩ ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸಹಕಾರಿ ಸಂಘ ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುದರ್ಶನ ಎಸ್.ಪಿ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ತಿಳಿಸುತ್ತಾ, ತಮ್ಮ ವಿದ್ಯಾರ್ಥಿ ಜೀವನದ ಸುಂದರ ಕ್ಷಣಗಳನ್ನು ನೆನಪಿಸಿಕೊಂಡರು.
ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ ಬಾಲಚಂದ್ರ ಗೌಡ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎಂ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಕೃತಿಕಾ ಬಿ ಮತ್ತು ರತ್ನಸಿಂಚನ ಜೆ ಪ್ರಾರ್ಥಿಸಿ, ವಾಣಿಜ್ಯ ಶಾಸ್ತ್ರ ಸಂಘದ ಸಂಚಾಲಕಿ ಶ್ರೀಮತಿ ದಿವ್ಯಾ ಟಿ.ಎಸ್ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಪ್ರಾಸ್ತಾವಿಕ ಮಾತನ್ನಾಡಿದರು.
ವಿದ್ಯಾರ್ಥಿನಿ ಜಸ್ಮಿತಾ ವೈ ವಂದಿಸಿ, ಅಂಕಿತ ಮತ್ತು ಸಲ್ಮತ್ ಅಸ್ರ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗಕ್ಕೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ, ವಿಭಾಗದ ಉಪನ್ಯಾಸಕರುಗಳಾದ ಶ್ರೀ ಶ್ರೀಧರ ವಿ ಮತ್ತು ಶ್ರೀಮತಿ ಗೀತಾ ಶೆಣೈ ಇವರು ಸಹಕರಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.