ದುಗ್ಗಲಡ್ಕದಲ್ಲಿ ನಗರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

0

ಸುಳ್ಯದ ಸೈಂಟ್ ಜೋಸೆಫ್ ಶಾಲೆಗೆ ಸಮಗ್ರ ಪ್ರಶಸ್ತಿ

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಸುಳ್ಯ ನಗರ ವಲಯ ಮಟ್ಟದ 14-17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ಅ.6 ಮತ್ತು 7 ರಂದು ದುಗ್ಗಲಡ್ಕ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟದ ಮೂರು ವಿಭಾಗದಲ್ಲಿಯೂ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಸುಳ್ಯ ನಗರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.