ಗಾಂಧಿನಗರ ಹೋಬಳಿ ಮಟ್ಟದ ಕ್ರೀಡಾಕೂಟ

0

ಮಂಡೆಕೋಲು ಸ.ಉ.ಹಿ.ಪ್ರಾ.ಶಾಲೆ, ಸ.ಹಿ.ಪ್ರಾ.ಶಾಲೆ ಅಡ್ಪಂಗಾಯ ಮತ್ತು ಸ.ಉ.ಹಿ.ಪ್ರಾ.ಶಾಲೆ ಪೇರಾಲು ಇದರ ಆಶ್ರಯದಲ್ಲಿ ಗಾಂಧಿನಗರ ಹೋಬಳಿ ಮಟ್ಟದ ಕ್ರೀಡಾಕೂಟವು ಸರಕಾರಿ ಪ್ರೌಢಶಾಲಾ ಅಜ್ಜಾವರದಲ್ಲಿ ಅ.೭ರಂದು ನಡೆಯಿತು.
ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ್ ರವರ ಅಧ್ಯಕ್ಷತೆಯಲ್ಲಿ, ಕ್ರೀಡಾ ಕೂಟವನ್ನು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ ಉದ್ಘಾಟಿಸಿದರು.


ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ರಾಹುಲ್ ಅಡ್ಪಂಗಾಯ, ಮಂಡೆಕೋಲು ಗ್ರಾ.ಪಂ. ಸದಸ್ಯರಾದ ತಾರನಾಥ ಕೊಡೆಂಚಿಕಾರ್, ಶ್ರೀಮತಿ ಶಶಿಕಲಾ ಹಾಗೂ ಅಡ್ಪಂಗಾಯ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಶ್ರಫ್ ಸಅದಿ ಎ.ಬಿ., ಹಾಗೂ ಪೇರಾಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಸುಶೀಲ, ಅಜ್ಜಾವರ ಪ್ರೌ. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಜಯರಾಮ ಬಾಕಿಲ, ಅಡ್ಪಂಗಾಯ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಸೈನಾರ್ ಹಾಜಿ ಗೋರಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಗೋಪಾಲಕೃಷ್ಣ ಬನ, ಅಜ್ಜಾವರ ಕ್ಲಸ್ಟರ್ ಸಿಆರ್‌ಪಿ ಶ್ರೀಮತಿ ಸವಿತಾ, ಮಂಡೆಕೋಲು ಶಾಲಾ ಮುಖ್ಯ ಶಿಕ್ಷಕಿ ಮಂಜುಳಾ, ಅಡ್ಪಂಗಾಯ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆ ಹಾಗೂ ಪೇರಾಲು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಿಲ್ಪಾ ಗಾಣಿಗ, ಅಜ್ಜಾವರ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ ಉಪಸ್ಥಿತರಿದ್ದರು. ಗಾಂಧಿನಗರ ಹೋಬಳಿಗೊಳಪಡುವ ೨೧ ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ಕಲ್ತಡ್ಕ, ಸದಸ್ಯರಾದ ರಾಹುಲ್ ಅಡ್ಪಂಗಾಯ, ಲೀಲಾ ಮನಮೋಹನ, ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಕಾಶ ಕಣೆಮರಡ್ಕ, ಅಡ್ಪಂಗಾಯ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಶ್ರಫ್ ಸಅದಿ ಎ.ಬಿ., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಅಕ್ಷರದಾಸೋಹ ನಿರ್ದೇಶಕಿ ಶ್ರೀಮತಿ ವೀಣಾ ಎಂ.ಟಿ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ ಉಪಸ್ಥಿತರಿದ್ದರು. ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆ ಸ್ವಾಗತಿಸಿದರು. ಶ್ರೀಮತಿ ಶಿಲ್ಪಾ ಗಾಣಿಗ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವನಿತಾ ಕಾರ್ಯಕ್ರಮ ನಿರೂಪಿಸಿದರು.