ಶ್ರೀಶೂಲಿನಿದುರ್ಗಾದೇವಿ ಮತ್ತು ಶಾಸ್ತಾವು ಕ್ಷೇತ್ರ ಮುತ್ಲಾಜೆ-ಚಣಿಲದಲ್ಲಿ ದುರ್ಗಾಪೂಜೆ, ನವರಾತ್ರಿಯ ಪ್ರಯುಕ್ತ ಅ.
19 ರಂದು ಗಣಪತಿ ಹವನ’ ಹಾಗೂ ದುರ್ಗಾಪೂಜೆ ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ, ಸಂಜೆ ದುರ್ಗಾಪೂಜೆ , ಶ್ರೀ ಕೃಷ್ಣ ಭಜನಾ ಮಂಡಳಿ ಗುತ್ತಿಗಾರು ಹಾಗೂ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಭಜನಾ ಸೇವಾ ಸಮಿತಿ ವಳಲಂಬೆ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಮಂಗಳಾರತಿ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಅ.20 ಬೆಳಿಗ್ಗೆ ಗಂಟೆ 9.00ರಿಂದ ಆಯುಧಪೂಜಾ ಕಾರ್ಯಕ್ರಮ ನಡೆಯಲಿದೆ.
ಅ.19 ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ
ದುರ್ಗಾಪೂಜೆಯ ಪ್ರಯುಕ್ತ
ಪುರುಷರ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ ಅ.19 ರಂದು ನಡೆಯಲಿದೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು ಪ್ರಥಮ, ದ್ವಿತೀಯ, ತೃತೀಯ, ಚರ್ತುರ್ಥ ಬಹುಮಾನವಾಗಿ ನಗದು ಹಾಗೂ ಟ್ರೋಫಿ ಇರಲಿದೆ. ಎಂದು ಸಂಘಟಕರು ತಿಳಿಸಿದ್ದಾರೆ.