ಮರ್ಕಂಜ ದ ಮಿನುಂಗೂರಿನಲ್ಲಿ ನವರಾತ್ರಿ ಉತ್ಸವ ಆರಂಭ

0

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ನ15ರಿಂದ ನ.23ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ನವರಾತ್ರಿ ಪ್ರಯುಕ್ತ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ, ರಾತ್ರಿ ಸಂಜೆ 7ರಿಂದ 8 ರವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.