ಅ. 23ರ ತನಕ ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಬಳ್ಪ ಗ್ರಾಮದ ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ. 15ರಿಂದ ಅ. 23ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಅ. 15ರಂದು ಬೆಳಿಗ್ಗೆ ಗಣಪತಿ ಹವನ, ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾ ಯಾಗ ನಡೆಯಿತು.

ಅ. 18ರಂದು ಸಂಜೆ ಆಶ್ಲೇಷ ಬಲಿ ಪೂಜೆ, ದುರ್ಗಾಪೂಜೆ, ಅ. 22ರಂದು ಸಂಜೆ ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್‌ ಪ್ರಾಯೋಜಕತ್ವದಲ್ಲಿ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಇವರಿಂದ ಭಕ್ತಿ ಸಂಗೀತದಲ್ಲಿ ಕಾರ್ಯಕ್ರಮ ನಡೆಯಲಿದೆ. ಅ. 23ರಂದು ಮಹಾನವಮಿ ಮಹೋತ್ಸವ, ಹೊಸ್ತಾರೋಗಣೆ, ಅಕ್ಷರಾಭ್ಯಾಸ, ಸಂಜೆ ಸಾಮೂಹಿಕ ದುರ್ಗಾಪೂಜೆ, ಆಯುಧ ಪೂಜೆ ನಡೆಯಲಿದೆ. ನವರಾತ್ರಿಯ ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.