ಧರ್ಮಸ್ಥಳ ಯೋಜನಾಧಿಕಾರಿ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ಮತ್ತು ಆಯುಧಪೂಜೆ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಕಚೇರಿಯಲ್ಲಿ ವರ್ಷಂಪ್ರತಿ ನಡೆಸಲ್ಪಡುವ ನವರಾತ್ರಿ ಹಬ್ಬದ ಸಮಯದಲ್ಲಿ ವಿಶೇಷವಾಗಿ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆಯು ಇಂದು ನೆರವೇರಿತು.


ಅರ್ಚಕರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಹವನವಾಗಿ ಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ನಾಗೇಶ್ ಪಿ ಹಾಗೂ ಕಚೇರಿ ವ್ಯವಸ್ಥಾಪಕ ಆತೀಷ್ ಮತ್ತು ಸಿಬ್ಬಂದಿ ವರ್ಗದವರು ,ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಭಾಗವಹಿಸಿದರು.