ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಆಯುಧ ಪೂಜೆ

0

ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋ ಘಟಕದಲ್ಲಿ ಆಯುಧ ಪೂಜಾ ಕಾರ್ಯಕ್ರಮ ಇಂದು ನಡೆಯಿತು.
ಈ ಸಂದರ್ಭದಲ್ಲಿ ಡಿಪೋ ಸಿಬ್ಬಂದಿಗಳಿಗೆ ಮತ್ತು ಮಕ್ಕಳಿಗೆ ವಿವಿಧ ಆಟೊ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕರ್ತವ್ಯದಿಂದ ನಿವೃತ್ತಿ ಹೊಂದುವ ನೌಕರರಿಗೆ ಬೀಳ್ಕೊಡುಗೆ ಸಮಾರಂಭವು ಈ ಸಂದರ್ಭದಲ್ಲಿ ನಡೆಯಿತು.

ಅರ್ಚಕರಾದ ಶ್ರೀ ಹರಿ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಘಟಕದ ವ್ಯವಸ್ಥಾಪಕರು ವಸಂತ ನಾಯಕ್, ಪಾರು ಪಥ್ಯದಾರರಾದ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

ಘಟಕದ ಸಿಬ್ಬಂದಿಗಳಾದ ಗೋಪಾಲಕೃಷ್ಣ ಹಾಗೂ ಲೋಕೇಶ್ ಕಾರ್ಯಕ್ರಮ ನಿರೂಪಿಸಿ ಸಹಾಯಕ ಅಧಿಕಾರಿ ಅಬುಸಾಲಿ ಸಹಕರಿಸಿದರು.