ಸುಳ್ಯ ಶಾರದಾಂಬ ಉತ್ಸವದ ಪ್ರಯುಕ್ತ ಮಹಾಗಣಪತಿ ಹವನ ಹಾಗೂ ಚಂಡಿಕಾ ಮಹಾಯಾಗ

0

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ , ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಶಾರದಾಂಬ ಕಲಾವೇದಿಕೆಯಲ್ಲಿ ನಡೆಯುತ್ತಿರುವ ಶ್ರೀ ಶಾರದಾಂಬ ಉತ್ಸವದ ಪ್ರಯುಕ್ತ ಅ.26ರಂದು ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಶ್ರೀ ಚಂಡಿಕಾ ಮಹಾಯಾಗ ನಡೆಯುತ್ತಿದೆ.

ಬೆಳಿಗ್ಗೆ ಮಹಾಗಣಪತಿ ಹವನ ನಡೆದು ಇದೀಗ ಚಂಡಿಕಾ ಮಹಾಯಾಗ ನಡೆಯುತ್ತಿದೆ. ಮಧ್ಯಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಶ್ರೀ ದೇವಿಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಶಾರದಾಂಬ ಉತ್ಸವ ಸಮಿತಿಯ ಪದಾಧಿಕಾರಿಗಳು, ದಸರಾ ಸೇವಾ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.