ನಾಳೆ ಅ.27: ಸಂಪಾಜೆ ಗ್ರಾ.ಪಂ.ನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ನೋಂದಣಿ ಅಭಿಯಾನ

0

ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ ಹಾಗೂ ಘರ್ ಘರ್ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗಳ ನೋಂದಣಿ ಅಭಿಯಾನವು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಾಳೆ ನಡೆಯಲಿದೆ.
ಕೇಂದ್ರ ಸರ್ಕಾರದ ಯೋಜನೆಗಳ ಅಭಿಯಾನದಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಹಾಗೂ ಮಹಾತ್ಮಗಾಂಧಿ ರಾಷ್ರ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಲಾನುಭವಿಯ ಆಧಾರ್ ಪ್ರತಿ ಹಾಗೂ ಕೆನರಾ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಹಾಜರಾಗಿ, ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಗ್ರಾಮ ಪಂಚಾಯತಿ ವತಿಯಿಂದ ತಿಳಿಸಲಾಗಿದೆ.