ಐವರ್ನಾಡಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆ

0

ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿಯವರ ಮನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲಾಯಿತು.


ಶಾಸಕಿ ಕು.ಭಾಗೀರಥಿ ಮುರುಳ್ಯ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ, ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಗ್ರಾಮ ಪಂಚಾಯತ್ ಸದಸ್ಯರು,ಸಹಕಾರಿ ಸಂಘದ ನಿರ್ದೇಶಕರು, ಹಿರಿಯರಾದ ಮಾಧವ ಭಟ್ ಶೃಂಗೇರಿ, ಪ್ರಭಾಕರ ಕುತ್ಯಾಡಿ, ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಟೀವಿಯ ಮೂಲಕ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದರು.