ಕಲ್ಮಡ್ಕ ಗ್ರಾಮ ಪಂಚಾಯತಿಗೆ ಶವಪೆಟ್ಟಿಗೆಯ ಹಸ್ತಾಂತರ

0

ಕಲ್ಮಡ್ಕ ಗ್ರಾಮ ಪಂಚಾಯತಿಗೆ ಶವ ಸಂಸ್ಕಾರಕ್ಕಾಗಿ ಶವಪೆಟ್ಟಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಉಸ್ತುವಾರಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ/ಪಂಬೆತ್ತಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಕಾರದಿಂದ ದೇಣಿಗೆ ಪಡೆದು ಶವಪೆಟ್ಟಿಗೆಯನ್ನು ಖರೀದಿಸಿದ್ದು ಶವ ಸಂಸ್ಕಾರಕ್ಕೆ ಉಚಿತವಾಗಿ ನೀಡಲು ಸಿರ್ಧರಿಸಿದ್ದು ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ , ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು. ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಅಬ್ದುಲ್ ಗಫೂರ್ ಇವರು ಸ್ವಾಗತಿಸಿದರು , ಮಹೇಶ್ ಕರಿಕ್ಕಳ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಇವರು ಅಭಿನಂದಿಸಿದರು.