ಡಾl ಕೆ.ಟಿ.ವಿಶ್ವನಾಥರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

0


ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ , ಸಂಘಟಕ ಕೆ.ಟಿ.ವಿಶ್ವನಾಥ ರಿಗೆ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಇದೀಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆಯಾಗಿದ್ದು, ಸಮಾಜಸೇವಾ ಕ್ಷೇತ್ರದಿಂದ ಕೆ.ಟಿ.ವಿಶ್ವನಾಥರಿಗೆ ಈ ಪ್ರಶಸ್ತಿ ಒಲಿದು ಬಂದಿದೆ.


ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಕೆ.ಟಿ.ವಿಶ್ವನಾಥರು ದುಗ್ಗಲಡ್ಕದ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ, ಕುರಲ್ ತುಳುಕೂಟದ ಸಂಚಾಲಕರಾಗಿ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದು, ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಅಮೆಚೂರು ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನೂ ಹಲವಾರು ಸಾಮಾಜಿಕ , ಕ್ರೀಡಾ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಕಾರ್ಯಕ್ರಮಗಳ ಯಶಸ್ವಿ ಸಂಘಟಕರೆಂದು ಹೆಸರು ಗಳಿಸಿದ್ದಾರೆ.