ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಸುಳ್ಯ: ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನ. 1ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್
ಎಜುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು
ನಾಡಗೀತೆ, ಹಾಡಿದರು. ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಗೀತಾ ದೊಪ್ಪ, ಬಿ.ಎಸ್ಸಿ ನರ್ಸಿಂಗ್ ಪ್ರಾಂಶುಪಾಲೆ ಪ್ರೇಮಾ, ಪ್ರೊ. ಸುಧಾ ರುದ್ರಪ್ಪ ಸೇರಿದಂತೆ
ಸಂಸ್ಥೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.