ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಸಾಪ ಸಾಹಿತ್ಯ ಸಂಭ್ರಮ

0

ಎನ್ನೆಂಸಿಯಲ್ಲಿ ಡಾ.ಯು.ಆರ್.ಅನಂತಮೂರ್ತಿ ನೆನಪು ಕಾರ್ಯಕ್ರಮ


ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಐ.ಕ್ಯೂ.ಎ.ಸಿ ಕನ್ನಡ ವಿಭಾಗ ಕನ್ನಡ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ವೈವಿಧ್ಯ ಕಾರ್ಯಕ್ರಮ ನವೆಂಬರ್ 2ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು.

ಕಾರ್ಯಕ್ರಮ ದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯದರ್ಶಿಗಳಾದ ಕೆ.ವಿ. ಹೇಮನಾಥ ಇವರು ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಕೈ ಬರಹದ ಕೃತಿ ಶೀ. ರಾಮಾಯಣ ದರ್ಶನಂನು ತೆರೆಯುವುದರ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.
ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತ ಮೂರ್ತಿ ನೆನಪು ಕಾರ್ಯಕ್ರಮ ವನ್ನು ನೆಹರೂ ಮೆಮೋರಿಯಲ್ ಕಾಲೇಜಿನ ಉಪನ್ಯಾಸಕರಾದ ಡಾ. ಅನುರಾಧ ಕುರುಂಜಿ ಯವರು ನಡೆಸಿ ಕೊಟ್ಟರು.

ವೇದಿಕೆಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ., ಶೈಕ್ಷಣಿಕ ಸಲಹೆಗಾರರಾದ ಪ್ರೊ.ಬಾಲಚಂದ್ರ ಗೌಡ, ಐಕ್ಯೂಎಸಿ ವಿಭಾಗದ ಸಂಯೋಜಕರಾದ ಡಾ. ಮಮತಾ ಕೆ., ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಪ್ರೊ. ರತ್ನಾವತಿ, ಕಾರ್ಯಕ್ರಮ ನಿರ್ದೇಶಕರಾದ ಪ್ರೊ. ಸಂಜೀವ ಕುದ್ಪಾಜೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿಗಳಾದ ದಯಾನಂದ ಆಳ್ವ, ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮದ ಬಳಿಕ ಹೆಸರಾಂತ ಗಾಯಕರಾದ ಕೆ. ಆರ್. ಗೋಪಾಲಕೃಷ್ಣ , ಅಧ್ಯಕ್ಷರು ಭಾವನಾ ಸುಗಮ ಸಂಗೀತ ಸುಳ್ಯ, ತೇಜಸ್ ಕಲ್ಲುಗುಂಡಿ, ಶ್ರೀಮತಿ. ಆರತಿ ಪುರುಷೋತ್ತಮ, ಸಂಧ್ಯಾ ಮಂಡೆಕೋಲು ಇವರುಗಳಿಂದ ವೈವಿಧ್ಯಮಯ ಗೀತಾ ಸಾಹಿತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.

ಐಕ್ಯೂಎಸಿ ಸಂಯೋಜಕರಾದ ಡಾ.ಮಮತಾ ಕೆ. ಸ್ವಾಗತಿಸಿ, ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ವಂದಿಸಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.