ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

0

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ನಗರ ಪಂಚಾಯತ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನ.೦೨ರಂದು ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ನ್ಯಾಯಲಯದ ಸಿವಿಲ್ ನ್ಯಾಯಧೀಶರು ಹಾಗೂ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್‍ಯದರ್ಶಿ ಕು.ಅರ್ಪಿತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಭ್ರಷ್ಟಾಚಾರದ ವಿರುದ್ಧ ಸರಕಾರಿ ಇಲಾಖೆಗಳಲ್ಲಿ ಅಧಿಕಾರಿಗಳು ವಹಿಸಬೇಕಾದ ಕರ್ತವ್ಯದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಗರ ಪಂಚಾಯತ್ ಅಧಿಖಾರಿಗಳು ಮತ್ತು ಸಿಬ್ಬಂದಿಗಳಿಗೆ ಭ್ರಷ್ಟಾಚಾರದ ವಿರುದ್ಧದ ಜಾಗೃತಿ ಭೋಧನೆಯನ್ನು ಭೋದಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸುಳಖ್ಯ ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ., ಸಹಾಯಕ ಸರಕಾರಿ ಅಭಿಯೋಜಕರಾದ ರಮೇಶ ಆರ್., ಅರೋನ್ ಡಿ ಸೋಜಾ ಹಾಗೂ ಪ್ಯಾನಲ್ ವಕೀಲರಾದ ಬಿ.ಹರೀಶ್, ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರ ಪಂಚಾಯತ್ ಸದಸ್ಯರುಗಳಾದ ಎಂ.ವೆಂಕಪ್ಪ ಗೌಡ, ಶೀಲಾ ಅರುಣ್ ಕುರುಂಜಿ, ಶಶಿಕಲಾ ನೀರಬಿದಿರೆ, ಬುದ್ಧ ನ್ಯಾಕ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸರೋಜಿನಿ ಪೆಲ್ತಡ್ಕ ಹಾಗೂ ನಗರ ಪಂಚಾಯತ್ ಸಿಬ್ಬಂದಿಗಳಾದ ಶಶಿಕಲಾ ಸೇರಿದಂತೆ ಇತರ ಸಿಬ್ಬಂದಿಗಳು ಭ್ರಷ್ಟಾಚಾರದ ವಿರುದ್ಧದ ಭೋದನೆಯನ್ನು ಸ್ವೀಕರಿಸಿದರು.