ನಡುಗಲ್ಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 50ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು, ಶಿಕ್ಷಕಿಯರಾದ ಶ್ರೀಮತಿ ವನಜಾಕ್ಷಿ, ಶ್ರೀಮತಿ ಮೋಕ್ಷ, ಕುಮಾರಿ ಸುಧಾರಾಣಿ ಇವರ ಮಾರ್ಗದರ್ಶನದೊಂದಿಗೆ ಕನ್ನಡ ಕವಿಗಳ ಹಾಡು,ಭಾಷಣ, ಲಘು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಾರಿಪ್ಪಾ ಡಿ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾ ಡಿದರು. ಶ್ರೀಮತಿ ಸವಿತಾ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.