ಕಳಂಜದ ಮಸೂದ್ ಕೊಲೆ ಪ್ರಕರಣ : ಇನ್ನಿಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

0

ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲಿನಲ್ಲಿರುವ ಇನ್ನಿಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

ಕಳೆದ ವರ್ಷ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ರವರು ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.

ಪ್ರಕರಣದ ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಆರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.