ಪೆರುವಾಜೆ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಸೆಟ್ ಮತ್ತು ನೆಟ್ ಪರೀಕ್ಷಾ ತಯಾರಿ ಕುರಿತು ಕಾರ್ಯಾಗಾರ

0

ಪೆರುವಾಜೆಯ ಡಾ. ಕೆ .ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವ್ಯಕ್ತಿ ಕೋಶದ ವತಿಯಿಂದ “ಕೆಸೆಟ್ ಮತ್ತು ನೆಟ್ ಪರೀಕ್ಷಾ ತಯಾರಿ ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ನಡೆಯಿತು.


ಚಿಕ್ಕಮಗಳೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ
ದೀಕ್ಷಿತ್ ಕುಮಾರ್ ಅವರು
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಕಾಲೇಜಿನ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಿನುತಾ ಎಂ. ಕಾರ್ಯಾಗಾರದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಂ.ಕಾಂ ವಿದ್ಯಾರ್ಥಿಗಳಾದ ಕು. ಶೃತಿ ಸ್ವಾಗತಿಸಿ , ಕು. ಚೈತ್ರ ವಂದಿಸಿದರು. ಪ್ರಜ್ಞಾ ಸಿ.ಎಂ ಕಾರ್ಯಕ್ರಮವನ್ನು ನಿರೂಪಿಸಿದರು.