ಕನಕಮಜಲು ಯುವಕ ಮಂಡಲದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

0

ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ -ನಾಡು ನುಡಿಯ ಬಗ್ಗೆ ಸ್ಪರ್ಧೆ

ಯುವಜನ ವಿಕಾಸ ಕೇಂದ್ರ , ಯುವಕ ಮಂಡಲ ಕನಕಮಜಲು ಇದರ ವತಿಯಿಂದ ಕನಕಮಜಲಿನ ಶ್ರೀ ನ.ರಾ. ಗೌ. ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಹಮೀದ್ ಅವರು ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮಕ್ಕಳಿಗೆ ಕನ್ನಡ ಭಾಷೆಯ
ಅರಿವು ಮೂಡಿಸುವ ಸಲುವಾಗಿ ಕನ್ನಡ ನಾಡು, ನುಡಿಯ ಕುರಿತು ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಸ್ವಸ್ತಿಕ್ ಕುತ್ಯಾಳ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೇಷಮ್ಮ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕವೃಂದದವರು, ಎಸ್.ಡಿ.ಎಂ. ಸಿ. ಪದಾಧಿಕಾರಿಗಳು, ಯುವಕ ಮಂಡಲದ ಪದಾಧಿಕಾರಿಗಳು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.